ಆರ್ಸಿಬಿಯಲ್ಲಿ ಇರುವಷ್ಟು ದಿನ ಕೊಹ್ಲಿ ರವರನ್ನು ಹಾಡಿ ಹೊಗಳಿ , ಇದೀಗ ಸಿರಾಜ್ ರಾಹುಲ್ ನಾಯಕತ್ವದ ಕುರಿತು ಏನು ಹೇಳಿದ್ದಾರೆ ಗೊತ್ತೇ??

128

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಅತ್ಯುತ್ತಮವಾಗಿ ಪ್ರದರ್ಶನ ನೀಡುತ್ತಿದ್ದ ಬಡ ಕುಟುಂಬ ಮೂಲದ ಮೊಹಮ್ಮದ್ ಸಿರಾಜ್ ರವರು ಭಾರತೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಲು ಶಿಫಾರಸ್ಸು ನೀಡಿದ್ದು ವಿರಾಟ್ ಕೊಹ್ಲಿ ಅವರೇ ಎಂದು ಹೇಳಬಹುದಾಗಿದೆ. ವಿರಾಟ್ ಕೊಹ್ಲಿ ಅವರ ನಾಯಕತ್ವದಲ್ಲಿ ಭಾರತೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಸಿರಾಜ್ ತಮಗೆ ಸಿಕ್ಕಿರುವ ಅವಕಾಶಗಳನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ.

ಹೀಗಾಗಿಯೇ ಐಪಿಎಲ್ ನಲ್ಲಿ ಕಳಪೆ ಪ್ರದರ್ಶನ ನೀಡಿದ್ದರೂ ಕೂಡ ರಾಷ್ಟ್ರೀಯ ತಂಡದಲ್ಲಿ ನೀಡಿರುವ ಉತ್ತಮ ಪ್ರದರ್ಶನವನ್ನು ಪರಿಗಣನೆಗೆ ತೆಗೆದುಕೊಂಡು ಅವರಿಗೆ ತಂಡದಲ್ಲಿ ಸ್ಥಾನವನ್ನು ನೀಡಲಾಗುತ್ತಿದೆ. ವಿರಾಟ್ ಕೊಹ್ಲಿ ಅವರು ಭಾರತೀಯ ಕ್ರಿಕೆಟ್ ತಂಡದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಭಾರತೀಯ ಕ್ರಿಕೆಟ್ ತಂಡದ ನಾಯಕನಾಗಿ ರೋಹಿತ್ ಶರ್ಮ ಹಾಗೂ ಉಪನಾಯಕನಾಗಿ ಕೆಎಲ್ ರಾಹುಲ್ ಆಯ್ಕೆಯಾಗಿದ್ದಾರೆ. ಸದ್ಯಕ್ಕೆ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ ತಂಡದ ನಾಯಕನಾಗಿ ಕೆಎಲ್ ರಾಹುಲ್ ರವರು ತಂಡವನ್ನು ಮುನ್ನಡೆಸಿದರು.

ಈ ಸಂದರ್ಭದಲ್ಲಿ ಒಬ್ಬ ಬೌಲರ್ ಆಗಿ ಮೊಹಮ್ಮದ್ ಸಿರಾಜ್ ರವರು ತಮ್ಮ ಸ್ಥಾನವನ್ನು ಸಾಬೀತುಪಡಿಸಿಕೊಂಡು ಉತ್ತಮ ಬೌಲಿಂಗ್ ಪ್ರದರ್ಶನವನ್ನು ನೀಡಿದ್ದಾರೆ. ಒಂದು ಕಾಲದಲ್ಲಿ ವಿರಾಟ್ ಕೊಹ್ಲಿ ಅವರನ್ನು ಹೊಗಳುತ್ತಿದ್ದ ಸಿರಾಜ್ ಈಗ ಕೆಎಲ್ ರಾಹುಲ್ ರವರನ್ನು ಮನಬಂದಂತೆ ಬಣ್ಣಿಸುತ್ತಿದ್ದಾರೆ. ಜಿಂಬಾಬ್ವೆ ಸರಣಿಯಲ್ಲಿ ಒಬ್ಬ ನಾಯಕನಾಗಿ ಕೆಎಲ್ ರಾಹುಲ್ ರವರು ನಮಗೆ ಬೌಲಿಂಗ್ ಮಾಡಲು ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಿದ್ದಾರೆ, ನಮ್ಮ ಪ್ಲಾನ್ಗಳನ್ನು ಕಾರ್ಯರೂಪಕ್ಕೆ ತರಲು ಸಂಪೂರ್ಣ ಸ್ವಾತಂತ್ರ್ಯವನ್ನು ಕೆ ಎಲ್ ರಾಹುಲ್ ರವರು ನಾಯಕನಾಗಿ ನೀಡಿದ್ದರಿಂದಲೇ ನಾವು ಅತ್ಯುತ್ತಮವಾಗಿ ಪ್ರದರ್ಶನ ನೀಡಲು ಸಾಧ್ಯವಾಯಿತು ಎಂಬುದಾಗಿ ಸಿರಾಜ್ ಹೇಳಿದ್ದಾರೆ. ಜಿಂಬಾಬ್ವೆ ಸರಣಿಯಲ್ಲಿ ಸಿರಾಜ್ ರವರ ಬೌಲಿಂಗ್ ಪ್ರದರ್ಶನದ ಬಗ್ಗೆ ನಿಮ್ಮ ಅನಿಸಿಕೆಗಳನ್ನು ತಪ್ಪದೆ ಕಾಮೆಂಟ್ ಮೂಲಕ ತಿಳಿಸಿ.

Leave A Reply

Your email address will not be published.