ಕೊನೆ ಗಳಿಗೆಯಲ್ಲಿ ವಿರಾಟ್ ಕೊಹ್ಲಿ ಗೆ ಶಾಕ್ ನೀಡಿದ ದ್ರಾವಿಡ್, ರೋಹಿತ್ ಹಾಗೂ ಗಂಗೂಲಿ: ಕಿಂಗ್ ಕೊಹ್ಲಿ ಅಂತ್ಯ ಆರಂಭವಾಯಿತೇ??

155

ನಮಸ್ಕಾರ ಸ್ನೇಹಿತರೇ ಭಾರತ ಕ್ರಿಕೆಟ್ ತಂಡ ಸದ್ಯ ವೆಸ್ಟ್ ಇಂಡೀಸ್ ವಿರುದ್ಧ ಟಿ 20 ಸರಣಿ ಆಡುತ್ತಿದೆ. ಈ ಸರಣಿ ಮುಗಿದ ನಂತರ ಭಾರತ ಕ್ರಿಕೆಟ್ ಜಿಂಬಾಬ್ವೆ ವಿರುದ್ಧ ಮೂರು ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ. ಈ ಸರಣಿಗೆ ಸದ್ಯ ಫಾರ್ಮ್ ಕಳೆದುಕೊಂಡಿರುವ ಭಾರತದ ರನ್ ಮಶೀನ್ ವಿರಾಟ್ ಕೊಹ್ಲಿ ತಂಡಕ್ಕೆ ಮರಳುತ್ತಾರೆ ಎಂದು ನೀರಿಕ್ಷಿಸಲಾಗಿತ್ತು. ಆದರೇ ಜಿಂಬಾಬ್ವೆ ವಿರುದ್ಧ ಸರಣಿಗೆ ಸದ್ಯ ತಂಡವನ್ನು ಪ್ರಕಟಿಸಿರುವ ಬಿಸಿಸಿಐ ವಿರಾಟ್ ಕೊಹ್ಲಿ ಸೇರಿದಂತೆ ಹಲವಾರು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿದೆ.

ಈ ನಡುವೆ ಇತ್ತಿಚೆಗಷ್ಟೇ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಯನ್ನು ಮುನ್ನಡೆಸಿ, ಐತಿಹಾಸಿಕ ಸರಣಿ ಗೆಲ್ಲುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ ಆರಂಭಿಕ ಆಟಗಾರ ಶಿಖರ್ ಧವನ್ ರನ್ನು ನಾಯಕನನ್ನಾಗಿ ನೇಮಿಸಿದೆ. ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿಕೇಟ್ ಕೀಪರ್ ಬ್ಯಾಟ್ಸಮನ್ ರಿಷಭ್ ಪಂತ್, ಜಸಪ್ರಿತ್ ಬುಮ್ರಾ ಸೇರಿದಂತೆ ಹಲವಾರು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಹಲವಾರು ತಿಂಗಳುಗಳ ನಂತರ ತಂಡಕ್ಕೆ ಪುನರಾಗಮಿಸಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ ದೀಪಕ್ ಚಾಹರ್ ಪುನರ್ ಆಗಮಿಸಿದ್ದಾರೆ. ಇನ್ನು ಮಧ್ಯಮ ಕ್ರಮಾಂಕದ ಬ್ಯಾಟ್ಸಮನ್ ರಾಹುಲ್ ತ್ರಿಪಾಠಿ ತಂಡಕ್ಕೆ ಸೇರಿರುವ ಹೊಸ ಆಟಗಾರರಾಗಿದ್ದಾರೆ.

ಇದೇ ಆಗಸ್ಟ್ 27ರಿಂದ ಯು.ಎ.ಇ ಯಲ್ಲಿ ಆರಂಭವಾಗಲಿರುವ ಏಷ್ಯಾ ಕಪ್ ವೇಳೆ ವಿರಾಟ್ ಕೊಹ್ಲಿ ತಂಡಕ್ಕೆ ಕೂಡಿಕೊಳ್ಳಬಹುದು ಎಂದು ಹೇಳಲಾಗಿದೆ. ಈ ಬಗ್ಗೆ ನಿಮ್ಮ ಮುಕ್ತ ಅಭಿಪ್ರಾಯಗಳನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಿ. ತಂಡ ಇಂತಿದೆ : ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ಶುಭಮಾನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್(ವೀ.ಕೀ),ಸಂಜು ಸ್ಯಾಮ್ಸನ್ (ವೀ.ಕಿ), ವಾಷಿಂಗ್ಟನ್ ಸುಂದರ್,ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್,ಅಕ್ಷರ್ ಪಟೇಲ್, ಆವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್.

Leave A Reply

Your email address will not be published.