ರೈಲ್ವೆ ಇಲಾಖೆ 3115 ಹುದ್ದೆಗಳಿಗೆ ಅರ್ಜಿ ಅಹ್ವಾನ – ಯಾವುದೇ ಪರೀಕ್ಷೆ ಇಲ್ಲ ನೇರ ನೇಮಕಾತಿ -Eastern Railway Recruitment 2024.

Eastern Railway Recruitment 2024 – Apply Online for 3115 Apprentice Posts : ಈಸ್ಟರ್ನ್ ರೈಲ್ವೆಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಇದೀಗಾಗಲೇ ಅಧಿಸೂಚನೆ ಹೊರಡಿಸಿದ್ದು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಅರ್ಹತೆಯನ್ನು ಹೊಂದಿರಬೇಕು.

ಅಭ್ಯರ್ಥಿಗಳಿಗೆ ಕನಿಷ್ಠ ಅಂದರೆ 15 ವರ್ಷ ತುಂಬಿರಬೇಕು ಮತ್ತು ಗರಿಷ್ಠ 24 ವರ್ಷ ಮೀರಿರಬಾರದು.ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ ,ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ. ಇನ್ನು ಅರ್ಜಿ ಶುಲ್ಕದ ವಿಚಾರಕ್ಕೆ ಬರುವುದಾದರೆ ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಮತ್ತೆಲ್ಲ ಅಭ್ಯರ್ಥಿಗಳಿಗೆ 100/- ಶುಲ್ಕ ನಿಗದಿಪಡಿಸಲಾಗಿದೆ.

ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ರೈಲ್ವೆ ಇಲಾಖೆ ಮೆರಿಟ್ ಲಿಸ್ಟ್ ತಯಾರುಮಾಡಿ, ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಿದ ನಂತರ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಸೆಪ್ಟೆಂಬರ್ 24 ರಿಂದ ಅರ್ಜಿ ಸಲ್ಲಿಕೆ ಆರಂಭ ಆಗಲಿದ್ದು ಅಕ್ಟೋಬರ್ 23 ರ ವರೆಗೆ ಅರ್ಜಿ ಸಲ್ಲಿಸಬಹುದು.

Eastern railwayJobsRailway recruitmentVacancy
Comments (0)
Add Comment