ಅಂಗನವಾಡಿ ನೇಮಕಾತಿ 2024 – Anganwadi Recruitment Karnataka 2024

253

Anganwadi Recruitment Karnataka 2024: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ರಾಜ್ಯದ ವಿವಿಧ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರುಒಟ್ಟು ಹುದ್ದೆಗಳು 1476 ಹುದ್ದೆಗಳು ಖಾಲಿ ಇದ್ದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಮಂಡ್ಯ ,ದಕ್ಷಿಣ ಕನ್ನಡ, ರಾಯಚೂರು, ರಾಮನಗರ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹುದ್ದೆಗಳು ಖಾಲಿ ಇವೆ.

ಮಂಡ್ಯ – 341,ದಕ್ಷಿಣ ಕನ್ನಡ – 335,ರಾಯಚೂರು – 391ರಾಮನಗರ – 216,ಉಡುಪಿ – 193 ಜಿಲ್ಲಾವಾರು ಇಷ್ಟು ಹುದ್ದೆಗಳು ಖಾಲಿ ಇವೆ.ಅಂಗನವಾಡಿ ಕಾರ್ಯಕರ್ತೆ – ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.ಅಂಗನವಾಡಿ ಸಹಾಯಕಿ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ .ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವ‍ರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಅಂಗನವಾಡಿ ಕಾರ್ಯಕರ್ತೆ :ರೂ.10,000/-

ಅಂಗನವಾಡಿ ಸಹಾಯಕಿ : ರೂ.5,000/-

ಇನ್ನುಳಿದಂತೆ ಕಡೆಯ ದಿನಾಂಕಗಳು ಈ ಕೆಳಗಿನಂತಿದೆ

ಮಂಡ್ಯ 20 ಸೆಪ್ಟೆಂಬರ್ 2024,ದಕ್ಷಿಣ ಕನ್ನಡ 29 ಸೆಪ್ಟೆಂಬರ್ 2024,ರಾಯಚೂರು 

ರಾಮನಗರ 30 ಸೆಪ್ಟೆಂಬರ್ 2024

ಉಡುಪಿ .

ಅರ್ಜಿ ಸಲ್ಲಿಸುವ ಲಿಂಕ್: https://karnemakaone.kar.nic.in/abcd/ApplicationForm_JA_org.aspx

https://karnemakaone.kar.nic.in/abcd/ApplicationForm_JA_org.aspx
Leave A Reply

Your email address will not be published.