ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವನಂತಹ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.(Chikkaballapur District Gram Panchayat Job Recruitment 2024 ) ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಚಿಕ್ಕಬಳ್ಳಾಪುರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಒಳಪಟ್ಟ ಇದರಲ್ಲಿಒಟ್ಟು ಹುದ್ದೆಗಳು 21 ಹುಡ್ಡೆಗಳಿದ್ದು, ಆನ್ಲೈನ್ (Online) ಮೂಲಕವೇ ಅರ್ಜಿ ಸಲ್ಲಿಸಬೇಕು.
ಮೇಲ್ಕಂಡ ಹುದ್ದೆಗೆ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅದರ ಜೊತೆಗೆ ಲೈಬ್ರರಿ ಸೈನ್ಸ್ ನಲ್ಲಿ ಸರ್ಟಿಫಿಕೇಷನ್ ಕೋರ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳ ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.ದಿನಾಂಕ 21/09/2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳು ಹಾಗೆ ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಸಾಮಾನ್ಯ ಅಭ್ಯರ್ಥಿಗಳಿಗೆ – ರೂ. 5002ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ರೂ. 300ಎಸ್ಸಿ – ಎಸ್ಟಿ, ಪ್ರ-1, ಮಾಜಿ ಸೈನಿಕ – ರೂ. 200ವಿಶೇಷ ಚೇತನ ಅಭ್ಯರ್ಥಿಗಳಿಗೆ – ರೂ. 100 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.ಪಿ.ಯು.ಸಿ ಪರೀಕ್ಷೆಯಲ್ಲಿ ಅಭ್ಯರ್ಥಿಯು ಗಳಿಸಿದ ಅಂಕಗಳನ್ನು ಆಧರಿಸಿ ಅಧಿಸೂಚಿಸಿದ ಖಾಲಿ ಹುದ್ದೆಗಳಿಗೆ ರೋಸ್ಟರ್ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪದವಿ ಪಡೆದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.ಸೆಪ್ಟೆಂಬರ್ 2 ರಿಂದ ಆರಂಭ ಆಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21 ಸೆಪ್ಟೆಂಬರ್ 2024.ಅರ್ಜಿ ಸಲ್ಲಿಸಲು ಲಿಂಕ್ https://sevasindhuservices.karnataka.gov.in/renderApplicationForm.do;jsessionid=CB548BC1CE705E5937C894DBDDD3E17A?serviceId=20250010&UUID=ba02fb2d-e55f-4249-9d29-53b73c64dc3b&directService=true&tempId=8500&serviceNameToDisplay=Recruitment+for+Library+Supervisors+in+Zilla+Panchayat&grievDefined=0&serviceLinkRequired=No&userLoggedIn=N&source=CTZN&OWASP_CSRFTOKEN=TY3F-IVHF-XT2G-YLXV-EI7Z-MW3D-DPPF-F8CN