ಗ್ರಾಮ ಪಂಚಾಯತ್ ನೇರ ನೇಮಕಾತಿ 2024 – District Gram Panchayat Recruitment 2024 – ಇಲ್ಲಿದೆ ಸಂಪೂರ್ಣ ಮಾಹಿತಿ.

Mysore District Gram Panchayat Recruitment 2024 : ಮೈಸೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇದೀಗ ಪ್ರಕಟಣೆ ಹೊರಡಿಸಿದ್ದು ಆಸಕ್ತರು ಅರ್ಜಿ ಸಲ್ಲಿಸಿ. ಒಟ್ಟು19ಹುದ್ದೆಗಳು ಖಾಲಿ ಇದ್ದು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

ಅರ್ಹ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರಬೇಕು ಹಾಗೂ ಕನಿಷ್ಠ 03 ತಿಂಗಳ ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಟ 35 ವರ್ಷ ವಯಸ್ಸಾಗಿರಬೇಕು. ಸರ್ಕಾರಿ ನಿಯಮಗಳ ಪ್ರಕಾರ ವಯೋಮಿತಿ ಸಡೀಲಿಕೆ ಇರಲಿದೆ.ಅದೇ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸಿರುವವರು ಅರ್ಜಿ ಸಲ್ಲಿಸಬಹುದು. ಆ ವ್ಯಾಪ್ತಿಯಲ್ಲಿ ಅಭ್ಯರ್ಥಿ ಇಲ್ಲದೆ ಹೋದರೆ ತಾಲ್ಲೂಕು ಮೂಲದಲ್ಲಿ ಅರ್ಜಿ ಸಲ್ಲಿಸಬಹುದು.

ಅಕ್ಟೋಬರ್ 3 ರಿಂದ ಅರ್ಜಿ ಪ್ರಕ್ರಿಯೆ ಆರಂಭಗೊಂಡಿತು ಅಕ್ಟೋಬರ್ 30 ಕೊನೆಯ ದಿನವಾಗಿರುತ್ತದೆ. ಅರ್ಜಿ ಸಲ್ಲಿಸುವವರು ಸೇವಾ ಸಿಂಧು ಅಪ್ಲಿಕೇಶನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಧಿಕೃತವಾದ ಆದಿ ಸೂಚನೆಯನ್ನು ಕೆಳಗೆ ಲಗತ್ತಿಸಲಾಗಿದೆ.

Government jobsGovernment orderGovt jobsKarnataka government jobsMysoreRecruitment
Comments (0)
Add Comment