PWD ನೇಮಕಾತಿ ಅಧಿಸೂಚನೆ 2024 – PWD Recruitment 2024
PWD Recruitment 2024 – Apply Online for 42 Assistant Executive Engineer Posts – ಕರ್ನಾಟಕ ಲೋಕೋಪಯೋಗಿ ಇಲಾಖೆ (KPWD) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ ಆ ಪ್ರಕಾರವಾಗಿ ಅಭ್ಯರ್ಥಿಗಳು ಎಲ್ಲಾ ಮಾಹಿತಿ ಅರಿತು ಅಪ್ಲೈ ಮಾಡಬಹುದು. ಒಟ್ಟು 42 ಹುದ್ದೆಗಳು ಖಾಲಿ ಇದ್ದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – RPC 30 ಮತ್ತು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ – HK 12.
KPWD ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. ಸರ್ಕಾರಿ ನಿಯಮದ ಪ್ರಕಾರ ವಯಸ್ಸಿನಲ್ಲಿ ಸಡಿಲಿಕೆ ಇದೆ.
ಅರ್ಜಿ ಶುಲ್ಕಎಸ್ಸಿ – ಎಸ್ಟಿ / ಪ್ರವರ್ಗ-I / ಅಂಗವಿಕಲ ಅಭ್ಯರ್ಥಿಗಳು: ಇಲ್ಲ,ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300/-ಸಾಮಾನ್ಯ ಅಭ್ಯರ್ಥಿಗಳು: ರೂ.600/-ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ವ್ಯಕ್ತಿತ್ವ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಅಕ್ಟೋಬರ್ 3 ರಿಂದ ಅರ್ಜಿ ಸಲ್ಲಿಕೆ ಆರಂಭಗೊಂಡು ನವೆಂಬರ್ 4 ಕೊನೆ ದಿನವಾಗಿರುತ್ತದೆ.